Friday, June 5, 2026
Homeತಾಜಾ ಸುದ್ದಿಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ...!

ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ…!

- Advertisement -
- Advertisement -

ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ.

ಕೋಲಾರದ ವಿಶಾಲ್ ಮಾರ್ಟ್ ಎದುರು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರು ಅಲ್ಲೇ ಗುಂಫುಗೂಡಿದ್ದರು. ಇದೇ ಮಾರ್ಗವಾಗಿ ದತ್ತಮಾಲಾಧಾರಿಗಳು ಘೋಷಣೆ ಕೂಗುತ್ತ ಬಸ್ ಲ್ಲಿ ತೆರಳುವಾಗ ಅಲ್ಲಿದ್ದ ಗುಂಪು ಅಡ್ಡಗಟ್ಟಿ ಬಸ್ ಮೇಲೆ ಕಲ್ಲು ತೂರಿದೆ ಎನ್ನಲಾಗಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದತ್ತಮಾಲಾಧಾರಿಗಳು ಮತ್ತು ಶ್ರೀರಾಮಸೇನೆ ಕಾರ್ಯಕರ್ತರು ಕೋಲಾರ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕೋಲಾರ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!