Sunday, June 7, 2026
Homeಕರಾವಳಿಉಡುಪಿಉಡುಪಿ: ಹಿಂದಿಂದ ಸ್ಕೂಟರ್ ನಲ್ಲಿ ಬಂದ ಅಪರಿಚಿತರು ಮಹಿಳೆಯ ಫೋನ್ ಎಗರಿಸಿ ಪರಾರಿ !

ಉಡುಪಿ: ಹಿಂದಿಂದ ಸ್ಕೂಟರ್ ನಲ್ಲಿ ಬಂದ ಅಪರಿಚಿತರು ಮಹಿಳೆಯ ಫೋನ್ ಎಗರಿಸಿ ಪರಾರಿ !

- Advertisement -
- Advertisement -

ಉಡುಪಿ: ಮಹಿಳೆಯೊಬ್ಬರು ಮೊಬೈಲ್ ನಲ್ಲಿ ಮಾತನಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಮೊಬೈಲ್ ಕಳವು ಮಾಡಿರುವ ಘಟನೆ ಉಡುಪಿಯ ಎಂ.ಜಿ.ಎಂ ಕಾಲೇಜು ಬಳಿ ನಡೆದಿದೆ.

ಈ ಬಗ್ಗೆ ನಾಗವೇಣಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ನಾಗವೇಣಿ ಅವರು ಕಡಿಯಾಳಿಯ ಫರ್ನಿಚರ್ ಅಂಗಡಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದಾರೆ.

ಹಿಂದಿನಿಂದ ಸ್ಕೂಟರ್ ನಲ್ಲಿ ಬಂದ ಇಬ್ಬರು ಅಪರಿಚಿತರು ನಾಗವೇಣಿ ಅವರ ಕೈಯಲ್ಲಿದ್ದ ಮೊಬೈಲ್ ನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!