ಉಡುಪಿ: ಇಲ್ಲಿನ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು, ಬಸ್ಸಿನಲ್ಲಿಯೇ ದಿಢೀರ್ ಅಸ್ವಸ್ಥಗೊಂಡ ಪರಿಣಾಮವಾಗಿ ಖಾಸಗಿ ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಆಗಸ್ಟ್ 22 ಗುರುವಾರದಂದು ಉಡುಪಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಎಕೆಎಂಎಸ್ (AKMS) ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿಯೋರ್ವಳು ಉಡುಪಿಗೆ ತೆರಳಲು ಹತ್ತಿದ್ದಾಳೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದು, ಕೂಡಲೇ ಬಸ್ಸಿನ ಚಾಲಕ ನಸೀಫ್, ಹಾಗೂ ನಿರ್ವಾಹಕ ಮೋಹಿತ್ ಬಸ್ಸನ್ನು ಉಡುಪಿಯ ಟಿ.ಎಂ.ಎ.ಪೈ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ನಂತರದಲ್ಲಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಎನ್ನಲಾಗಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿನಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ನೇರವಾದ ಎಕೆಎಂ ಎಸ್ ಚಾಲಕ ಹಾಗೂ ನಿರ್ವಾಹಕರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


