ಒಡಿಶಾ: ಇಲ್ಲಿನ ಮಲ್ಕಾನ್‌ಗಿರಿ ಜಿಲ್ಲೆಯಲ್ಲಿಸರ್ಕಾರಿ ವಸತಿ ಶಾಲೆಯಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಬೋರ್ಡ್ ಪರೀಕ್ಷೆ ಬರೆದ ಕೆಲವೇ ಹೊತ್ತಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ವಿಚಿತ್ರ ಘಟನೆಯೊಂದು ನಡೆದಿದೆ.
ವಿದ್ಯಾರ್ಥಿನಿ ಒಡಿಶಾದ ಚಿತ್ರಕೊಂಡದಲ್ಲಿರುವ ಆಸ್ಪತ್ರೆಯಲ್ಲಿ ಪರೀಕ್ಷೆ ಬರೆದು ಬಂದ ದಿನವೇ ಸಂಜೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಘಟನೆಯ ಕುರಿತಂತೆ ಶಾಲಾ ಆಡಳಿತ ಮಂಡಳಿಗೆ ಗೊತ್ತಾಗುತ್ತಿದ್ದಂತೆ, ಈ ವಿಚಾರವನ್ನು ವಿದ್ಯಾರ್ಥಿನಿಯ ಪೋಷಕರ ಗಮನಕ್ಕೆ ತಂದಿದ್ದಾರೆ. ಆದರೆ ಪೋಷಕರು ಈ ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದು, ಶಾಲಾ ಆಡಳಿತ ಮಂಡಳಿಯನ್ನೇ ಹೊಣೆ ಮಾಡಿದೆ. ಆದರೆ ಶಾಲಾ ಆಡಳಿತ ಮಂಡಳಿ ತಾವು ಹೊಣೆಯಲ್ಲ ಇದು ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯದಿಂದ ಆಗಿರಬಹುದು ಎಂದು ಹೇಳಿಕೊಂಡಿದ್ದಾರೆ.
ಸದ್ಯ ವಿದ್ಯಾರ್ಥಿನಿ ಮತ್ತು ಮಗು ಆಸ್ಪತ್ರೆಯಲ್ಲಿರುವುದರಿಂದ, ವಿದ್ಯಾರ್ಥಿನಿಯ ಅರೋಗ್ಯ ಸುಧಾರಿಸಿದ ಬಳಿಕವೇ ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


