Saturday, June 6, 2026
Homeಕರಾವಳಿಉಡುಪಿಕಾರ್ಕಳದ ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

ಕಾರ್ಕಳದ ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

- Advertisement -
- Advertisement -

ಕಾರ್ಕಳ: ಇಲ್ಲಿನ ದುರ್ಗಾ ಫಾಲ್ಸ್‌ಗೆ ವಿದ್ಯಾರ್ಥಿಯೋರ್ವ ಈಜಲು ತೆರಳಿದ್ದು, ಈಜುವ ವೇಳೆಯಲ್ಲಿ ನೀರು ಪಾಲಾದ ಘಟನೆ ನ.28 ಗುರುವಾರದಂದು ಮಧ್ಯಾಹ್ನ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಜಾಯಲ್ ಡಯಾಸ್ (19) ಎನ್ನಲಾಗಿದೆ.

ಜಾಯಲ್ ಡಯಾಸ್ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಈತ ಸೇರಿದಂತೆ 7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್‌ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!