Sunday, June 14, 2026
Homeತಾಜಾ ಸುದ್ದಿಕಾಲೇಜು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ

ಕಾಲೇಜು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ

- Advertisement -
- Advertisement -

ಶಿವಮೊಗ್ಗ: ವಿದ್ಯಾರ್ಥಿನಿಯೋರ್ವಳು ಕಾಲೇಜು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಕಾಲೇಜಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿ ಮೇಘಾಶ್ರೀ (18). ಈಕೆ ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿ ಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಮೇಘಾಶ್ರೀ ಹೋಂ ಸಿಕ್‌ಗೆ ಕೂಡ ಒಳಗಾಗಿದ್ದಳು. ಈಕೆಯು ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯು ವ್ಯಕ್ತವಾಗಿದೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಮೇಘಾ ಶ್ರೀ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಘಟನೆಯ ಕುರಿತು ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!