Friday, June 5, 2026
Homeತಾಜಾ ಸುದ್ದಿಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ: ಸಾರ್ವಜನಿಕರಿಂದ ರಕ್ಷಣೆ

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ: ಸಾರ್ವಜನಿಕರಿಂದ ರಕ್ಷಣೆ

- Advertisement -
- Advertisement -

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೊಬ್ಬನನ್ನು ಸಾರ್ವಜನಿಕರು ರಕ್ಷಿಸಿದ ಘಟನೆ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.

ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದಿದ್ದ ವಿದ್ಯಾರ್ಥಿ.

ರಕ್ಷಣ್ ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಬಳಿಕ ಸ್ಥಳೀಯರು ಮತ್ತು ಅಗ್ನಿಶಾಮಕದಳವರು ವಿದ್ಯಾರ್ಥಿಯನ್ನು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!