- Advertisement -
- Advertisement -
ಪುತ್ತೂರು: ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಮೃತ ವಿದ್ಯಾರ್ಥಿನಿ.
ಪ್ರತೀಕ್ಷಾ ಅವರು ಮೂರು ದಿನಗಳ ಹಿಂದೆ ಬೆದ್ರಾಳ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಆಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಫೆಬ್ರವರಿ 12 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
- Advertisement -