Thursday, June 4, 2026
Homeಕರಾವಳಿಉಡುಪಿಕುಂದಾಪುರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಿಕ್ಷಕಿ

ಕುಂದಾಪುರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಿಕ್ಷಕಿ

- Advertisement -
- Advertisement -

ಕುಂದಾಪುರ: ರಸ್ತೆ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೃತಪಟ್ಟಿದ್ದಾರೆ.

ಮುದೂರು ಸೆಕ್ಕೋಡು ನಿವಾಸಿ, ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ (32) ಮೃತಪಟ್ಟವರಾಗಿದ್ದಾರೆ.

ನಿನ್ನೆ ಬೆಳಗ್ಗೆ ದಂಪತಿ ಮುದೂರಿನ ಮನೆಯಿದ ಬೈಕಿನಲ್ಲಿ ಶಾಲೆಗೆ ಹೊರಟಿದ್ದರು. ವಂಡ್ರೆ ಸಮೀಪ ಏಕಾಏಕಿ ರಸ್ತೆಯಲ್ಲಿ ದನವೊಂದು ಅಡ್ಡಬಂದ ಪರಿಣಾಮ ಬೈಕ್ ಶ್ರೀಕಾಂತ್ ಅವರ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಅಂಬಿಕಾ ಅವರ ತಲೆಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ರಾತ್ರಿ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!