Wednesday, June 24, 2026
Homeತಾಜಾ ಸುದ್ದಿಸರ್ಕಾರಿ ಬಸ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಮೃತ್ಯು,...

ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಮೃತ್ಯು, ಹಲವರಿಗೆ ಗಂಭೀರ ಗಾಯ

- Advertisement -
- Advertisement -

ರಾಯಚೂರು:  ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ಸೆ.05 ಗುರುವಾರದಂದು ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಘಟನೆಯಲ್ಲಿ ನಾಲ್ಕೈದು ಮಕ್ಕಳ ಕಾಲುಗಳು ಕತ್ತರಿಸಿ ಹೋಗಿದ್ದು, ಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು, ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಲವರ ಸ್ಥಿತಿ ಗಂಭೀರವಾಗಿದ್ದು, ಕೆಲವು ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯ ವಿವರ: ಲೊಯೊಲ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಮಾನ್ವಿಯ ಹೊರ ವಲಯದಲ್ಲಿ ಲೊಯೊಲ ಶಾಲೆಯಿದ್ದು, ಸುತ್ತಲಿನ ಹಳ್ಳಿಗಳಿಂದ‌ ಮಕ್ಕಳನ್ನು ಬಸ್ ಮೂಲಕ ನಿತ್ಯ ಕರೆ‌ ತರಲಾಗುತ್ತದೆ. ರಾಯಚೂರು ಕಡೆ ಹೊರಟಿದ್ದ ಸಾರಿಗೆ ಬಸ್  ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ಖಾಸಗಿ ಶಾಲಾ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. 

- Advertisement -

Latest News

error: Content is protected !!