- Advertisement -
![]()
- Advertisement -
ಕಡಬ: ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದಲ್ಲಿ ಓಮ್ಮಿ ಹಾಗೂ ಕ್ರೆಟಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ಮಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಓರ್ವ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗಾಯಗೊಂಡವರನ್ನು ಕಡಬ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
- Advertisement -


