Tuesday, February 27, 2024
Homeತಾಜಾ ಸುದ್ದಿಸಂಬಂಧಿಕರ ಮದುವೆಯಿಂದ ವಾಪಾಸ್ ಬರುತ್ತಿದ್ದ ವೇಳೆ ಭೀಕರ ಕಾರು ಅಪಘಾತ; ಸ್ಥಳದಲ್ಲೇ ಇಬ್ಬರು...

ಸಂಬಂಧಿಕರ ಮದುವೆಯಿಂದ ವಾಪಾಸ್ ಬರುತ್ತಿದ್ದ ವೇಳೆ ಭೀಕರ ಕಾರು ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು, ಐವರು ಗಂಭೀರ

spot_img
spot_img
- Advertisement -
- Advertisement -

ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಟುಂಬವೊಂದು ಸಂಬಂಧಿಕರ ಮದುವೆ ಸಮಾರಂಭಕ್ಕೆ ಹೋಗಿ ವಾಪಸ್ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ನಿವಾಸಿಗಳಾದ ಅರುಣ್ ಶೆಟ್ಟರ್ (50) ಹಾಗೂ ತಾಯಿ ವಿಜಯಲಕ್ಷ್ಮಿಶೆಟ್ಟರ್ (70)ಮೃತಪಟ್ಟಿದ್ದಾರೆ.

ತುಮಕೂರಿಗೆ ಕಾರಿನಲ್ಲಿ ಕುಟುಂಬಸ್ಥರೆಲ್ಲಾ ಸೇರಿ ಮದುವೆಗೆಂದು ಹೋಗಿ ವಾಪಸ್ಸಾಗುತ್ತಿದ್ದ ಸಂದರ್ಭ, ದಾವಣಗೆರೆ ಬಳಿಯ ಶಿರಮಗೊಂಡನಹಳ್ಳಿ ಸೇತುವೆ ಮೇಲೆ ವೇಗವಾಗಿ ಬಂದ ಕಾರ್ ಟ್ರಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.

ಇನ್ನು ಗಾಯಾಳುಗಳನ್ನು ದಾವಣಗೆರೆ ಎಸ್‌ಎಸ್‌ ಹೈಟೆಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಗಾಯಗೊಂಡವರಲ್ಲಿ ಕೆಲವರ ಪರಿಸ್ಥಿತಿ ಗಂಭೀರವಾಗಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!