Friday, June 5, 2026
Homeಅಪರಾಧಎರಡು ಬೈಕ್‌ ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ

ಎರಡು ಬೈಕ್‌ ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ

- Advertisement -
- Advertisement -

ಹಾಸನ: ಹಾಸನ ನಗರದ ಆಕಾಶವಾಣಿ ಪಕ್ಷದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎದುರಿನ ರಸ್ತೆಯಲ್ಲಿ ಎರಡು ಬೈಕ್‌ ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸರ್ಕಾರಿ ನೌಕರನೋರ್ವ ಸಾವನ್ನಪ್ಪಿರುವ ದುರ್ಘಟನೆ ಬೆಳಕಿಗೆ ಬಂದಿದೆ.

ಈ ಘಟನೆಯಲ್ಲಿ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್‌ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ದಿ.ತೀಯ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದೆ, ಮಲಶೆಟ್ಟಿ (59)ಮೃತ ವ್ಯಕ್ತಿ.

ಕಛೇರಿಗೆ ತೆರಳುತ್ತಿರುವ ಸಂದರ್ಭದಲ್ಲಿ ಬೈಕ್‌ನಲ್ಲಿ ಕ್ರಾಸ್ ಮಾಡುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಬೈಕ್‌ ವೊಂದು ನೌಕರನ ಬೈಕ್ ಗೆ ಗುದ್ದಿದೆ. ಆದರೆ ಡಿಕ್ಕಿ ಹೊಡೆದ ಬೈಕ್ ಸವಾರರು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯನ್ನು ಕಂಡ ಇನ್ನೋರ್ವ ಬೈಕ್ ಸವಾರ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಕ್ಕೀಡಾಗಿದ್ದಾರೆ.

- Advertisement -

Latest News

error: Content is protected !!