Friday, June 5, 2026
Homeತಾಜಾ ಸುದ್ದಿಬೆಳ್ತಂಗಡಿ: ಕೆಂಪು ಕಲ್ಲಿನ ಅಟ್ಟಿ ಮಗುಚಿ ಬಿದ್ದು ಮಗು ಸಾವು

ಬೆಳ್ತಂಗಡಿ: ಕೆಂಪು ಕಲ್ಲಿನ ಅಟ್ಟಿ ಮಗುಚಿ ಬಿದ್ದು ಮಗು ಸಾವು

- Advertisement -
- Advertisement -

ಬೆಳ್ತಂಗಡಿ: ಮನೆಯಂಗಳದಲ್ಲಿ ಇರಿಸಲಾಗಿದ್ದ ಕೆಂಪು ಕಲ್ಲಿನ ಅಟ್ಟಿ ಮಗುಚಿ ಬಿದ್ದು ಮೂರೂವರೆ ವರ್ಷ ಪ್ರಾಯದ ಮಗುವೊಂದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬಾಯ್ತಾರು ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಅಶ್ರಫ್ ಮತ್ತು ಸಮೀಮಾ ದಂಪತಿಯ ಮಗ ಮೊಹಮ್ಮದ್ ನೌಶೀರ್ ಎಂದು ಗುರುತಿಸಲಾಗಿದೆ.

ಕಟ್ಟಡ ನಿರ್ಮಾಣಕ್ಕೆ೦ದು ಮನೆಯಂಗಳದಲ್ಲಿ ತಂದಿರಿಸಲಾಗಿದ್ದ ಕೆಂಪು ಕಲ್ಲಿನ ಅಟ್ಟಿಯ ಬಳಿ ಮಗು ನೌಶೀರ್ ಆಟವಾಡುತ್ತಿದ್ದ ವೇಳೆ ಕಲ್ಲಿನ ಅಟ್ಟಿಯು ಮಗುಚಿ ಆತನ ಮೇಲೆಯೇ ಬಿದ್ದಿತ್ತು ಎಂದು ಶಂಕಿಸಲಾಗಿದೆ.

ಮಗು ಸುತ್ತಮುತ್ತ ಕಾಣದೆ ಇದ್ದಾಗ ಮನೆ ಮಂದಿ ಹುಡುಕಾಟ ನಡೆಸಿದರು.ಈ ವೇಳೆ ಅಂಗಳದಲ್ಲಿಟ್ಟಿದ್ದ ಕಲ್ಲಿನ ಅಟ್ಟಿಯು ಬಿದ್ದಿರುವುದನ್ನು ಕಂಡು ಅಲ್ಲಿ ಶೋಧಿಸಿದಾಗ ಮಗು ಕಲ್ಲಿನ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದು ಕ೦ಡು ಬಂದಿತ್ತು. ಮೃತ ಬಾಲಕ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ.

- Advertisement -

Latest News

error: Content is protected !!