Sunday, May 5, 2024
Homeತಾಜಾ ಸುದ್ದಿಛತ್ತೀಸ್ ಗಢದಲ್ಲಿ ನಡೆದ ನಕ್ಸಲರ ಅಟ್ಟಹಾಸಕ್ಕೆ 22 ಯೋಧರು ಹುತಾತ್ಮ

ಛತ್ತೀಸ್ ಗಢದಲ್ಲಿ ನಡೆದ ನಕ್ಸಲರ ಅಟ್ಟಹಾಸಕ್ಕೆ 22 ಯೋಧರು ಹುತಾತ್ಮ

spot_img
- Advertisement -
- Advertisement -

ಸುಕ್ಮಾ: ನಕ್ಸಲರು ನಡೆಸಿದ ಅಟ್ಟಹಾಸಕ್ಕೆ 22 ಯೋಧರು ಹುತಾತ್ಮರಾಗಿದ್ದು, 32ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.

ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಾಯಕ ಮಾದ್ವಿ ಹಿದ್ಮಾ ನೇತೃತ್ವದಲ್ಲಿ 300 ನಕ್ಸಲರು ಸಭೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಆರ್ಪಿಎಫ್ ಯೋಧರು ನಕ್ಸಲರು ಇದ್ದ ಅರಣ್ಯ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ 200-300 ನಕ್ಸಲರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ 22 ಯೋಧರು ಹುತಾತ್ಮರಾಗಿದ್ದಾರೆ. 32 ಯೋಧರು ಗಾಯಗೊಂಡಿದ್ದಾರೆ.

ಯೋಧರು ಹಾಗೂ ನಕ್ಸಲರ ನಡುವೆ ಸುಮಾರು 4 ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದೆ. ಇದೇ ವೇಳೆ ನಕ್ಸಲರ ವಿರುದ್ಧ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ 15 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಮಾರ್ಚ್ 21ರಂದು ಇದೇ ರೀತಿಯ ಘಟನೆ ನಡೆದಿದ್ದು, ಈ ಪ್ರದೇಶದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿ ದಾಳಿಯಲ್ಲಿ ಡಿಆರ್ ಜಿಯ 12 ಮಂದಿ ಸೇರಿದಂತೆ 17 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.

ಛತ್ತೀಸ್ ಘಡದಲ್ಲಿ ನಡೆದ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.

‘ಯೋಧರು ಅತ್ಯಂತ ಧೈರ್ಯದಿಂದ ಹೋರಾಡಿದ್ದಾರೆ. ಅವರ ತ್ಯಾಗವನ್ನು ದೇಶ ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬಗಳಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್, ಛತ್ತೀಸ್ ಘಢದಲ್ಲಿ ಮಾವೋವಾದಿಗಳ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಭದ್ರತಾ ಪಡೆಗಳು ಹುತಾತ್ಮರಾಗಿದ್ದಾರೆ. ಇದು ಅತ್ಯಂತ ದುಃಖಕರ ವಿಚಾರವಾಗಿದೆ. ಯೋಧರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆ. ಇಡೀ ದೇಶ ಅವರ ನೋವನ್ನು ಹಂಚಿಕೊಳ್ಳಲಿದೆ. ಯೋಧರ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!