Sunday, June 7, 2026
Homeಕರಾವಳಿಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಕಾರಿಗೆ ಡಿಕ್ಕಿ; ಕಾರು ಚಾಲಕ ಅಪಾಯದಿಂದ ಪಾರು

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಕಾರಿಗೆ ಡಿಕ್ಕಿ; ಕಾರು ಚಾಲಕ ಅಪಾಯದಿಂದ ಪಾರು

- Advertisement -
- Advertisement -

ಬಂಟ್ವಾಳ: ಲೊರೆಟ್ಟೋ ಬಳಿಯಲ್ಲಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ನಡೆದಿದೆ.

ಟಿಪ್ಪರ್  ಕೆ.ಎನ್.ಆರ್.ಸಿ. ಕಂಪೆನಿಗೆ ಸೇರಿದ್ದು, ಕಾರು ಚಾಲಕ ಮೈಸೂರು ಮೂಲದ ಕೃಷ್ಣ ಅರಸ ಎಂದು ತಿಳಿದು ಬಂದಿದೆ. 

ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಕೃಷ್ಣ ಅರಸರ ಮಗಳು ವಿದ್ಯಾಭ್ಯಾಸ ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರು ಮೂಡುಬಿದಿರೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಟಿಪ್ಪ‌ರ್ ಅತೀ ವೇಗದಿಂದ ಬಂದು ಎದುರಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇನ್ನು ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!