Monday, June 8, 2026
Homeತಾಜಾ ಸುದ್ದಿಬಂಡೆಮಠದ ಬಸವಲಿಂಗ ಶ್ರೀ ಆತ್ಮಹತ್ಯೆಗೆ ಟ್ವಿಸ್ಟ್: ಮಹಿಳೆಯೊಂದಿಗೆ ಸ್ವಾಮೀಜಿಯ ವೀಡಿಯೋ ಕಾಲ್‌ ವೈರಲ್

ಬಂಡೆಮಠದ ಬಸವಲಿಂಗ ಶ್ರೀ ಆತ್ಮಹತ್ಯೆಗೆ ಟ್ವಿಸ್ಟ್: ಮಹಿಳೆಯೊಂದಿಗೆ ಸ್ವಾಮೀಜಿಯ ವೀಡಿಯೋ ಕಾಲ್‌ ವೈರಲ್

- Advertisement -
- Advertisement -

ರಾಮನಗರ: ಬಂಡೆಮಠದ ಬಸವಲಿಂಗ ಶ್ರೀ ಆತ್ಮಹತ್ಯೆಗೆ ಟ್ವಿಸ್ಟ್ ದೊರೆತ್ತಿದ್ದು, ಸ್ವಾಮೀಜಿ, ಮಹಿಳೆಯೊಂದಿಗೆ ವೀಡಿಯೋ ಕಾಲ್‍ನಲ್ಲಿ ಮಾತನಾಡುತ್ತಿದ್ದ ಅಶ್ಲೀಲ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಬಂಡೆಮಠದ ಶ್ರೀಗಳ ಸಾವಿನ ಸುತ್ತ ದಿನೇ ದಿನೇ ಹೊಸ ಸ್ಫೋಟಕ ವಿಷಯಗಳು ಬಯಲಾಗುತ್ತಿದೆ. ಅಷ್ಟೇ ಅಲ್ಲದೇ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅವರು 2 ಪುಟಗಳ ಡೆತ್ ನೋಟ್ ಕೂಡಾ ಬರೆದಿದ್ದು, ಅದರಲ್ಲೂ ಹಲವರ ಹೆಸರನ್ನು ಬರೆದಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿ ಕುದೂರು ಪೊಲೀಸರು ಅನಾಮಧೇಯನ ಹೆಸರಿನ ಮೇಲೆ ಎಫ್‍ಐಆರ್ ದಾಖಲಿಸಿಕೊಂಡಿದ್ದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು.

- Advertisement -

Latest News

error: Content is protected !!