Saturday, June 6, 2026
Homeಕರಾವಳಿಉಡುಪಿಮಣಿಪಾಲ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮಣಿಪಾಲ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಮಣಿಪಾಲ: ಮಾನಸಿಕ ಖಿನ್ನತೆಗೊಳಗಾಗಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಳ್ಳಿ ಗ್ರಾಮದ ಕುಂಜಿಬೆಟ್ಟುವಿನಲ್ಲಿ ನಡೆದಿದೆ.

ಲಿಲ್ಲಿ ಡಿಸೋಜಾ (70) ಆತ್ಮಹತ್ಯೆ ಮಾಡಿಕೊಂಡವರು. ಇವರು 6 ತಿಂಗಳ ಹಿಂದೆಯೂ ಮನೆಯ ಸಮೀಪದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು ಎನ್ನಲಾಗಿದೆ. ನಿನ್ನೆ ಬೆಳಗ್ಗೆ ಮನೆಯ ಸಮೀಪ ಇರುವ ಬಾವಿಯಲ್ಲಿ ಲಿಲ್ಲಿ ಡಿಸೋಜಾ ಅವರ ಮೃತದೇಹ ನೀರಿನಲ್ಲಿ ಪತ್ತೆಯಾಗಿದೆ. ಮೃತರ ಮಗ ರಾಬರ್ಟ್ ಡಿಸೋಜಾ ನೀಡಿದ ಮಾಹಿತಿಯಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!