Wednesday, June 24, 2026
Homeತಾಜಾ ಸುದ್ದಿಮನೆಯಲ್ಲಿ ಸಾಕುತ್ತಿದ್ದ ಬೆಕ್ಕು ಕಚ್ಚಿ  ಮಹಿಳೆ ಸಾವು

ಮನೆಯಲ್ಲಿ ಸಾಕುತ್ತಿದ್ದ ಬೆಕ್ಕು ಕಚ್ಚಿ  ಮಹಿಳೆ ಸಾವು

- Advertisement -
- Advertisement -

ಶಿವಮೊಗ್ಗ : ಮನೆಯಲ್ಲಿ ಸಾಕುತ್ತಿದ್ದ ಬೆಕ್ಕು ಕಚ್ಚಿ  ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ತರಲಘಟ್ಟ ಕ್ಯಾಂಪ್​​ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ತರಲಘಟ್ಟ ಕ್ಯಾಂಪ್​​ನ ತರಲಘಟ್ಟ ಗ್ರಾಮದ ಗಂಗಿಬಾಯಿ(50) ಮೃತ ಮಹಿಳೆ.
ಗಂಗಿಬಾಯಿಗೆ ಕಳೆದ ಎರಡೂವರೆ ತಿಂಗಳ ಹಿಂದೆ ಬೆಕ್ಕು ಕಚ್ಚಿತ್ತು. ಮೊದಲ ರೇಬಿಸ್ ಇಂಜೆಕ್ಷನ್ ಪಡೆದುಕೊಂಡಿದ್ದರು. ಬಳಿಕ ಹುಷಾರಾಗಿದ್ದೇನೆ ಎಂದು ಒಂದೇ ಇಂಜೆಕ್ಷನ್ ಪಡೆದು ಪೂರ್ಣ ಇಂಜೆಕ್ಷನ್ ಪಡೆದಿರಲಿಲ್ಲ.

ಗ್ರಾಮದ ಆಶಾ ಕಾರ್ಯಕರ್ತೆಯರು ಇಂಜೆಕ್ಷನ್ ಪಡೆಯುವಂತೆ ತಿಳಿಸಿದರೂ ಗಂಗಿಬಾಯಿ ನಿರ್ಲಕ್ಷ್ಯ ವಹಿಸಿದ್ದರು. ಈ ನಡುವೆ ನಾಟಿ ಕಾರ್ಯದಲ್ಲಿ ಭಾಗಿಯಾಗಿದ್ದ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ಜ್ವರ ಹೆಚ್ಚಾಗಿ ಆರೋಗ್ಯ ಹದಗೆಟ್ಟಿದ್ದರಿಂದ ಶಿಕಾರಿಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿ ಗುಣವಾಗದೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗಂಗಿಬಾಯಿ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!