Thursday, June 4, 2026
Homeಕರಾವಳಿಉಡುಪಿಕಾರ್ಕಳ: ಕೃಷಿ ಹೊಂಡಕ್ಕೆ ಜಾರಿ ಬಿದ್ದು ಮಹಿಳೆ ಸಾವು

ಕಾರ್ಕಳ: ಕೃಷಿ ಹೊಂಡಕ್ಕೆ ಜಾರಿ ಬಿದ್ದು ಮಹಿಳೆ ಸಾವು

- Advertisement -
- Advertisement -

ಕಾರ್ಕಳ: ಕೃಷಿ ಹೊಂಡದಲ್ಲಿ ಕೈ-ಕಾಲು ತೊಳೆಯುತ್ತಿರುವಾಗ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸೂಡ ಗ್ರಾಮದ ಗಾಣದ ಬೆಟ್ಟು ಎಂಬಲ್ಲಿ ನಡೆದಿದೆ.

ಸೂಡ ಗ್ರಾಮದ ಗಾಣದ ಬೆಟ್ಟು ನಿವಾಸಿ ಸುಗುಣ (58) ಮೃತಪಟ್ಟವರು. ಮಧ್ಯಾಹ್ನದ ಊಟಕ್ಕಾಗಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯಲು ಹೋಗಿ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!