Tuesday, July 14, 2026
Homeಕರಾವಳಿಮಂಗಳೂರುಸಂಪಾಜೆ: ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ: ಓರ್ವ ಮಹಿಳೆ ಸಾವು

ಸಂಪಾಜೆ: ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ: ಓರ್ವ ಮಹಿಳೆ ಸಾವು

- Advertisement -
- Advertisement -

ಸುಳ್ಯ: ಕಾರು ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ  ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಸಂಪಾಜೆ ಸಮೀಪದ ಕಡೆಪಾಲ ಎಂಬಲ್ಲಿ ನಡೆದಿದೆ.

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಕೊಡಗು ಸಿದ್ಧಾಪುರದ ನೆಲ್ಲಿಹುದಿಕೇರಿಯದ್ದು ಎನ್ನಲಾಗಿದೆ. ಗಾಯಾಳುಗಳಿಗೆ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತಿದೆ.

- Advertisement -

Latest News

error: Content is protected !!