Tuesday, June 9, 2026
Homeಕರಾವಳಿಹೃದಯಾಘಾತದಿಂದ ಬೆಳ್ತಂಗಡಿ ತಾಲೂಕಿನ ಮಹಿಳೆ ಮೃತ್ಯು

ಹೃದಯಾಘಾತದಿಂದ ಬೆಳ್ತಂಗಡಿ ತಾಲೂಕಿನ ಮಹಿಳೆ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಚಿಬಿದ್ರೆ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ.

ಹೃದಯಾಘಾತದಿಂದ ಮೃತಪಟ್ಟ ಮಹಿಳೆ ಚಿಬಿದ್ರೆ ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31). ಇವರು ಹಲವು ವರ್ಷಗಳಿಂದ ಹೃದಯಕ್ಕೆ ಸಂಬಂಧ ಪಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಚಂದ್ರಕಲಾ ಅವರು ನೆರಿಯ ಗ್ರಾಮದ ಬಾಂದಡ್ಕದ ತಾಯಿ ಮನೆಯಲ್ಲಿ ವಾಸವಾಗಿದ್ದರು. ಸಂಜೆ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!