Friday, June 27, 2025
Homeಕರಾವಳಿಮಂಗಳೂರುಮಂಗಳೂರಿನಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಮಂಗಳೂರಿನಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

spot_img
- Advertisement -
- Advertisement -

ಮಂಗಳೂರು; ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ  ನಡೆದಿದೆಯ ತೆಲಂಗಾಣದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ  ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ. ಎರಡು ಹೆಣ್ಣು ಹಾಗೂ ಎರಡು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಕ್ಕಳು ಕ್ರಮವಾಗಿ 1.1 ಕೆಜಿ, 1.2 ಕೆಜಿ, 800 ಗ್ರಾಂ, 900 ಗ್ರಾಂ ತೂಕ ಹೊಂದಿವೆದ್ದಾರೆ. ಆದರೆ 30 ವಾರಗಳ ಹೆರಿಗೆಯಾಗಿದ್ದು, ಪ್ರಸವ ಪೂರ್ವ ಜನನವಾದ್ದರಿಂದ ಮಕ್ಕಳನ್ನು ಎನ್ಐಸಿಯುವಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದು ಅಪರೂಪದ ಹೆರಿಗೆಯಾಗಿದ್ದು 7,00,000 ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ ಎಂದು ಮಹಿಳೆಗೆ ಪ್ರಸವಪೂರ್ವ ಆರೈಕೆ ಮಾಡಿದ ಸ್ತ್ರೀರೋಗತಜ್ಞೆ ಡಾ.ಜೋಯ್ಲೀನ್ ಡಿ.ಅಲ್ಮೇಡಾ ಹೇಳಿದ್ದಾರೆ.

- Advertisement -
spot_img

Latest News

error: Content is protected !!