ಮಂಗಳೂರು; ಸಂಬಂಧಿಯ ಜೀವ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಜೀವ ತೆತ್ತ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅರ್ಚನಾ ಕಾಮತ್ (34) ಮೃತ ಮಹಿಳೆ.
ಅರ್ಚನಾ ಯಕೃತ್ತಿಗೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತನ್ನ ಯಕೃತ್ತನ್ನು ದಾನ ಮಾಡಿದ್ದರು. ಈ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಸೋಂಕಿಗೆ ತುತ್ತಾಗಿದ್ದರು ಎನ್ನಲಾಗಿದೆ. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್ ಸಕ್ರಿಯವಾಗಿದ್ದು ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದ ಸುದ್ದಿ ಆತ್ಮೀಯರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಸಂಬಂಧಿಕರು, ಆತ್ಮೀಯರು ಆಘಾತಕಾರಿ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ. ಅರ್ಚನಾ ಕಾಮತ್ ಅವರ ಸಾವಿಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.