- Advertisement -
![]()
- Advertisement -
ಮಂಗಳೂರು : ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಿ ಕಳ್ಳ ಪರಾರಿಯಾದ ಘಟನೆ ಮಂಗಳೂರಿನ ಕೊಂಚಾಡಿ ಕೊಪ್ಪಲಕಾಡಿನಲ್ಲಿ ನಡೆದಿದೆ.
ಕೆಲಸ ಮುಗಿಸಿ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಹಿಳೆಯ ಕತ್ತಿನಲ್ಲಿದ್ದ ಸುಮಾರು ಮೂರುವರೆ ಪವನ್ ತೂಕದ ಚಿನ್ನದ ಸರವನ್ನು ಎಗರಿಸಿದ್ದಾನೆ.ಮಹಿಳೆಯ ಬೊಬ್ಬೆ ಕೇಳಿ ಅಕ್ಕಪಕ್ಕದ ಮನೆಯವರೆಲ್ಲಾ ಓಡಿ ಬಂದಿದ್ದು, ಸಮೀಪದ ಮನೆಯ ಕಂಪೌOಡ್ ಹಾರಿ ಪರಾರಿಯಾಗಿದ್ದಾನೆ. ಅಲ್ಲದೇ ಬೇರೆ ಕಡೆ ತೆರಳಿ ಬಟ್ಟೆ ಬದಲಾಯಿಸಿ ಅನುಮಾನ ಬಾರದಂತೆ ತೆರಳಿದ್ದಾನೆ.
ಕಳ್ಳನ ಚಲನ ವಲನಗಳು ಸಮೀಪದ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸರ ಕಳೆದುಕೊಂಡ ಮಹಿಳೆಯು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -


