Monday, May 6, 2024
Homeತಾಜಾ ಸುದ್ದಿಮಗುವಿಗೆ ಜನ್ಮ ನೀಡಿದ ಏಳು ತಿಂಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ

ಮಗುವಿಗೆ ಜನ್ಮ ನೀಡಿದ ಏಳು ತಿಂಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ

spot_img
- Advertisement -
- Advertisement -

ನವದೆಹಲಿ : ಏಳು ತಿಂಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಮಹಿಳೆಯೊಬ್ಬರು ಈ ವರ್ಷ ಮಾರ್ಚ್ 31ರಂದು ತನ್ನ ಪತಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆ ಅಪಘಾತಕ್ಕೊಳಗಾಗಿದ್ದರು. ಆ ವೇಳೆ ಹೆಲ್ಮೆಟ್ ಧರಿಸದೇ ಇದ್ದ ಕಾರಣ ಆಕೆಯ ತಲೆಗೆ ತೀವ್ರ ಪೆಟ್ಟಾಗಿತ್ತು. ಹೀಗಾಗಿ ಮಹಿಳೆಯ ತಲೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.  ಆದರೆ ಪ್ರಯೋಜನವಾಗಿರಲಿಲ್ಲ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದರು.

ಮಹಿಳೆ ಕಣ್ಣು ತೆರೆದಿದ್ದರೂ, ಚಲನರಹಿತರಾಗಿದ್ದರು. ಇನ್ನು ಅಪಘಾತದ ವೇಳೆಗಾಗ್ಲೇ 40 ದಿನಗಳ ಆಕೆ ಗರ್ಭಿಣಿಯಾಗಿದ್ದು, ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ವೈದ್ಯರು ತಿಳಿಸಿದ್ದಾರೆ.

ಏಪ್ರಿಲ್ 1ರ ಮುಂಜಾನೆ ಮಹಿಳೆ ಗಂಭೀರ ಸ್ಥಿತಿಯಲ್ಲಿ ದೆಹಲಿ ಏಮ್ಸ್ ಗೆ ಬಂದಿದ್ದಾರೆ ಎಂದು ಏಮ್ಸ್ ನರಶಸ್ತ್ರಚಿಕಿತ್ಸಕ ಡಾ.ದೀಪಕ್ ಗುಪ್ತಾ ಹೇಳಿದ್ದಾರೆ. ಅಪಘಾತದ ವೇಳೆ ಆಕೆ 40 ದಿನಗಳ ಗರ್ಭಿಣಿಯಾಗಿದ್ದರು ಎನ್ನಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಹೊಟ್ಟೆಯಲ್ಲಿರುವ ಮಗು ಆರೋಗ್ಯವಾಗಿದೆ ಎಂದು ತಿಳಿದು ಬಂದಿದ್ದರಿಂದ ಗರ್ಭಪಾತಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ. ಇತ್ತೀಚೆಗಷ್ಟೇ ತಿಂಗಳು ಪೂರ್ಣಗೊಂಡ ಬಳಿಕ ಹೆರಿಗೆಯಾಗಿದೆ ಎಂದು ವಿವರಿಸಲಾಗಿದೆ. ಸದ್ಯ ಆಕೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಹಾಲುಣಿಸುವ ಸ್ಥಿತಿಯಲ್ಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!