Tuesday, June 9, 2026
Homeಕರಾವಳಿಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ್ದ ಮಹಿಳೆ ಹೃದಯಾಘಾತದಿಂದ ಮೃತ್ಯು

ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ್ದ ಮಹಿಳೆ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

ಸುಬ್ರಹ್ಮಣ್ಯ: ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರಿನ ಯಾತ್ರಾಥಿ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಮೃತಪಟ್ಟವರು ಬೆಂಗಳೂರಿನ ಎಂವಿ ಗಾರ್ಡನ್ ನಿವಾಸಿ ಶಿವಕುಮಾರ್ ಅವರ ಪತ್ನಿ ಲಕ್ಷ್ಮೀ (32). ಶಿವಕುಮಾರ್ ಅವರು ಪತ್ನಿ, ಮಕ್ಕಳೊಂದಿಗೆ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಲಕ್ಷ್ಮೀ ಹಾಗೂ ಮಕ್ಕಳು ಸಂಬಂಧಿಕರ ಜತೆ ಧರ್ಮಸ್ಥಳಕ್ಕೆ ತೆರಳಿ ರವಿವಾರ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ರಾತ್ರಿ ಲಕ್ಷ್ಮೀ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗೆ ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರದೊಯ್ದಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆಯ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!