Sunday, April 28, 2024
Homeಕರಾವಳಿಉಡುಪಿಅಂಗಾಂಗ ದಾನದಿಂದ ಸಾವಿನಲ್ಲೂ ಸಾರ್ಥಕ್ಯ ಕಂಡ ಮಹಿಳೆ

ಅಂಗಾಂಗ ದಾನದಿಂದ ಸಾವಿನಲ್ಲೂ ಸಾರ್ಥಕ್ಯ ಕಂಡ ಮಹಿಳೆ

spot_img
- Advertisement -
- Advertisement -

ಮಣಿಪಾಲ: ಮಹಿಳೆಯೊಬ್ಬರಿಗೆ ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡಿದ್ದು, ಮಹಿಳೆಯ ಅಂಗಾಂಗ ದಾನ ಮಾಡಲಾಗಿದ್ದು, ಈ ಮೂಲಕ ಸಾವಿನಲ್ಲೂ ಸಾರ್ಥಕ್ಯ ಮೆರೆದಿದ್ದಾರೆ.

ಘಟನೆಯ ವಿವರ: ಅಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಮಹಿಳೆಯು ಶಿವಮೊಗ್ಗ ಜಿಲ್ಲೆಯ 44 ವರ್ಷದ ಲಲಿತಮ್ಮ. ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳುವ ಲಕ್ಷಣ ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯ್ದೆ 1994ರ ಅನುಸಾರ ಲಲಿತಮ್ಮ ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು.

ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆ ವ್ಯಕ್ತಪಡಿಸಿದರು. ಜೀವಸಾರ್ಥಕತೆ ಪ್ರೋಟೋಕಾಲ್ ಮತ್ತು ನಿರ್ಧಾರಗಳ ಪ್ರಕಾರ, ದಾನ ಮಾಡಿದ ಶ್ವಾಸಕೋಶ ಗಳನ್ನು ಹೈದರಾಬಾದ್‌ನ ಕಿಮ್ಸ್, ಯಕೃತ್ ಅನ್ನು ಬೆಂಗಳೂರಿನ ಸ್ಪರ್ಶ ಆಸ್ಪತ್ರೆ, ಒಂದು ಮೂತ್ರಪಿಂಡವನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಕಳುಹಿಸಲಾಯಿತು. ಒಂದು ಮೂತ್ರಪಿಂಡ ಮತ್ತು ಎರಡು ಕಾರ್ನಿಯಾಗಳನ್ನು ಮಣಿಪಾಲ ದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ ಮಾತನಾಡಿ, ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಠ ಕೆಲಸವಾಗಿದ್ದು, ಅತ್ಯಂತ ಮಹತ್ವ ಪಡೆದಿದೆ ಎಂದು ಅಂಗಾಂಗ ದಾನ ಮಾಡಲು ನಿರ್ಧರಿಸಿದ ಲಲಿತಮ್ಮ ಅವರ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು.

- Advertisement -
spot_img

Latest News

error: Content is protected !!