Thursday, January 16, 2025
HomeUncategorizedಮಂಗಳೂರು: ಮಂಜನಾಡಿಯಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಮಂಗಳೂರು: ಮಂಜನಾಡಿಯಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

spot_img
- Advertisement -
- Advertisement -

ಮಂಗಳೂರು: ಮಂಜನಾಡಿಯಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಜನಾಡಿಯ ಕಲ್ಕಟ್ಟ‌ ನಿವಾಸಿ ಕುಬ್ರಾ ಮೃತ ದುರ್ದೈವಿ.

ಡಿಸೆಂಬರ್ ಏಳರಂದು ರಾತ್ರಿ ಮನೆಯಲ್ಲಿ ತಾಯಿ ಮತ್ತು ಮೂವರು ಹೆಣ್ಮಕ್ಕಳು ಮಲಗಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಮನೆಯವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮಕ್ಕಳ ತಾಯಿ ಕುಬ್ರಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಜನಾಡಿಯ ಖಂಡಿಗ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮಕ್ಕಳು ಮನೆಯಲ್ಲಿ ಒಂದೇ ಕೋಣೆಯಲ್ಲಿ ಮಲಗಿದ್ದರು. ಮಧ್ಯರಾತ್ರಿ ಮನೆಯೊಳಗಡೆ ಭಾರೀ ಸ್ಫೊಗೊಂಡ ಶಬ್ಧ ಕೇಳಿ ಬಂದಿದೆ. ಸ್ಫೋಟದ ತೀವ್ರತೆಗೆ ಆರ್‌ಸಿಸಿ ಮನೆಯ ಮೇಲ್ಭಾಗದಲ್ಲಿನ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿತ್ತು. ತಾಯಿ ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿದ್ರಗೊಂಡು ಸುಟ್ಟು ಕರಕಲಾಗಿತ್ತು.

- Advertisement -
spot_img

Latest News

error: Content is protected !!