Friday, June 5, 2026
Homeತಾಜಾ ಸುದ್ದಿಬೆಳ್ತಂಗಡಿ: ಕೆಲಸಕ್ಕೆಂದು ತೆರಳಿದ್ದ ಯುವತಿ ವಾಪಸ್ ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಕೆಲಸಕ್ಕೆಂದು ತೆರಳಿದ್ದ ಯುವತಿ ವಾಪಸ್ ಮನೆಗೆ ಬಾರದೆ ನಾಪತ್ತೆ

- Advertisement -
- Advertisement -

ಬೆಳ್ತಂಗಡಿ : ಕೆಲಸಕ್ಕೆಂದು ಹೋದ ಯುವತಿ ವಾಪಸ್ ಬಾರದೆ ನಾಪತ್ತೆಯಾಗಿರುವ ಘಟನೆ ತೆಂಕಾಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವತಿಯನ್ನು ರಕ್ಷಿತಾ(20) ಎಂದು ತಿಳಿಸಲಾಗಿದೆ.

ಇವರು ಗುರುವಾಯನಕೆರೆಯ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಉದ್ಯೋಗ ನಿರ್ವಹಿಸುತ್ತಿದ್ದರು. ಎಂದಿನಂತೆ ಡಿ. 29ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಸಂಜೆ ಸುಮಾರು ಹೊತ್ತಿನವರೆಗೂ ಮನೆಗೆ ಮರಳಿ ಬಾರದೆ ಇರುವುದನ್ನು ಕಂಡು ಮನೆಯವರು ಆಕೆ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲಕರಲ್ಲಿ ವಿಚಾರಿಸಿದ ವೇಳೆ ಆಕೆ ಕಲಸಕ್ಕೆ ಬಂದಿಲ್ಲವೆಂದು ಅಂಗಡಿ ಮಾಲಕರು ತಿಳಿಸಿದ್ದಾರೆ.

ಈ ಸಂಬಂಧ ಯುವತಿಯ ತಾಯಿ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ನಾಪತ್ತೆಯಾಗಿರುವ ಮಗಳನ್ನು ಪತ್ತೆಹಚ್ಚುವಂತೆ ಕೋರಿದ್ದಾರೆ. ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುವ ಈ ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

- Advertisement -

Latest News

error: Content is protected !!