Thursday, May 2, 2024
Homeಅಪರಾಧಇನ್ಸ್ಟಾಗ್ರಾಮ್‌ನಲ್ಲಿ RIP ಬರೆದು ಯುವಕನೊಬ್ಬ ಆತ್ಮಹತ್ಯೆಗೆ ಶರಣು

ಇನ್ಸ್ಟಾಗ್ರಾಮ್‌ನಲ್ಲಿ RIP ಬರೆದು ಯುವಕನೊಬ್ಬ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಕೇರಳದ ಎರ್ನಾಕುಲಂನ ಆಲುವಾದಲ್ಲಿ ತನ್ನ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಯುವಕನೊಬ್ಬ RIP ಎಂದು ಪೋಸ್ಟ್ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕ ಅಜಲ್ ಷರೀಫ್(28 ವರ್ಷ). ತಮ್ಮ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಹತ್ತು ನಿಮಿಷಗಳ ಮೊದಲು, ಅಜಲ್ ತನ್ನ ಸಾವಿನ ಕುರಿತು ಇನ್ಸ್ಟಾಗ್ರಾಮ್‌ನಲ್ಲಿ ಪ್ರಕಟಿಸಿ, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯು ಶುಕ್ರವಾರ ಸಂಜೆ 6:30ರ ಸುಮಾರಿಗೆ ನಡೆದಿದ್ದು, ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಜಲ್ ಕಂಡ ಕುಟುಂಬಸ್ಥರು ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆತ ಮೃತಪಟ್ಟಿದ್ದಾನೆ. ಅಜಲ್ ದುಬೈನಲ್ಲಿದ್ದು, ಉತ್ತಮ ಕೆಲಸ ಸಿಗದ ಕಾರಣ ಆತ ಕೊಂಚ ಖಿನ್ನತೆಗೆ ಒಳಗಾಗಿದ್ದ ಎಂದು ಕುಟುಂಬದವರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಅಜಲ್ ಅವರ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ 14 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಇದ್ದರು.

- Advertisement -
spot_img

Latest News

error: Content is protected !!