Thursday, June 4, 2026
Homeಕರಾವಳಿಉಡುಪಿಉಡುಪಿ: ಯುವಕನೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ

ಉಡುಪಿ: ಯುವಕನೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ

- Advertisement -
- Advertisement -

ಉಡುಪಿ: ಕುಂಜೂರು ಸಮೀಪ ಯುವಕನೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ರೈಲು ಹಳಿಯ ಮಧ್ಯೆ ಅಡ್ಡಲಾಗಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ರೈಲು ಚಲಿಸಿದ ರಭಸಕ್ಕೆ ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪಡುಬಿದ್ರಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತ ದೇಹವನ್ನು ಆಸಿಫ್ ಆಪತ್ಬಾಂಧವ ಅವರ ತಂಡ ಪಡುಬಿದ್ರಿ ಶವಾಗಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

- Advertisement -

Latest News

error: Content is protected !!