Thursday, June 4, 2026
Homeಕರಾವಳಿಪುತ್ತೂರು: ರೈಲಿನಡಿ ಬಿದ್ದು ಯುವಕ ಸಾವು

ಪುತ್ತೂರು: ರೈಲಿನಡಿ ಬಿದ್ದು ಯುವಕ ಸಾವು

- Advertisement -
- Advertisement -

ಪುತ್ತೂರು: ರೈಲಿನಡಿ ಬಿದ್ದು ಯುವಕನೋರ್ವ ಮೃತಪಟ್ಟ ಇಂದು ಸಂಜೆ ಮಿತ್ತೂರಿನಲ್ಲಿ ನಡೆದಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಕಬಕ-ಪುತ್ತೂರು ರೈಲ್ವೆ ನಿಲ್ದಾಣಕ್ಕೆ ತರುವಷ್ಟರಲ್ಲಿ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಇನ್ನು ರೈಲಿನಡಿ ಬಿದ್ದಿದ್ದರಿಂದ ಮೃತದೇಹವು ಛಿದ್ರಗೊಂಡಿದೆ.

ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆ ತಂದಿದ್ದಾರೆ. ಅಷ್ಟರಲ್ಲಿ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನೆ ನಡೆದ ಸಂದರ್ಭ ರೈಲ್ವೇ ಪೈಲೆಟ್ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ನೀಡಿದ ಮಾಹಿತಿಯಂತೆ ಪುತ್ತೂರು ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಬಂದಿತ್ತಾದರೂ ವ್ಯಕ್ತಿ ಆಗಲೇ ಮೃತಪಟ್ಟಿದ್ದರಿಂದ ಮುಂದೆ ರೈಲ್ವೇ ಇಲಾಖೆಯ ಪೊಲೀಸ್ ಬಂದ ಬಳಿಕ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸುವ ನಿಟ್ಟಿನಲ್ಲಿ ರೈಲು ನಿಲ್ದಾಣದಲ್ಲಿ ಮೃತ ದೇಹವನ್ನು ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ರೈಲಿನಡಿ ಬಿದ್ದ ಯುವಕನನ್ನು ಉತ್ತರ ಪ್ರದೇಶ ಮೂಲದವನು ಎನ್ನಲಾಗುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಕಾಲು ಜಾರಿ ಬಿದ್ದನೇ ಎಂಬ ಮಾಹಿತಿ ತಿಳಿದುಬರಬೇಕಿದೆ.

- Advertisement -

Latest News

error: Content is protected !!