- Advertisement -
![]()
- Advertisement -
ಕುಂದಾಪುರ: ಯುವಕನೊಬ್ಬ ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ಗುಜ್ಜಾಡಿ ಗ್ರಾಮದ ನಾಯಕವಾಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ.
ಗುಜ್ಜಾಡಿ ಗ್ರಾಮದ ನಿವಾಸಿ ಸುಜಯ (20) ಮೃತ ಯುವಕ. ಮರದ ಕೊಂಬೆಯು ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಸುಜಯ್ ಮೃತಪಟ್ಟಿದ್ದಾನೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


