Friday, June 5, 2026
Homeಕರಾವಳಿಉಡುಪಿಉಡುಪಿಯಲ್ಲಿ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಉಡುಪಿಯಲ್ಲಿ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

- Advertisement -
- Advertisement -

ಉಡುಪಿ: ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಕಬ್ಬಿನಾಲೆ ಎಂಬಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ. ಮುನಿಯಾಲು ನಿವಾಸಿ ಪವನ್ (25) ಮೃತ ದುರ್ದೈವಿ.

ಪವನ್ ಸ್ಥಳೀಯರ ಜೊತೆಗೆ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟರೆನ್ನಲಾಗಿದೆ. ಇವರ ಮೃತದೇಹವು ಸುಮಾರು 200 ಮೀ ದೂರದಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!