- Advertisement -
![]()
- Advertisement -
ಬಂಟ್ವಾಳ; ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟ್ವಾಳದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ ಎಂಬಲ್ಲಿನ ಯುವಕ ಮುಹಮ್ಮದ್ ಹಾರಿಸ್ (34) ಮೃತರು.
ಮುಹಮ್ಮದ್ ಹಾರಿಸ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ತನ್ನ ಸಹೋದ್ಯೋಗಿಯೋರ್ವನೊಡನೆ ಬೈಕಿನಲ್ಲಿ ತೆರಳುತ್ತಿದ್ದಾಗ ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಗೂಡ್ಸ್ ವಾಹನವು ಹಿಂಬದಿಯಿಂದ ಢಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಹಾರಿಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಿಂಬದಿಯಲ್ಲಿದ್ದ ಸಹೋದ್ಯೋಗಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸಂಬಂಧ ಎಚ್ ಎಸ್ ಆರ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


