- Advertisement -
![]()
- Advertisement -
ಕಡಬ : ಇಲ್ಲಿನ ಯುವಕನೋರ್ವ ಐರ್ಲೆಂಡ್ ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಕಡಬ ತಾಲೂಕು ಕಡಬ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಸಾಂಜೋ ಸುನಿಲ್ ಬುಧವಾರದಂದು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗಿದೆ.
ಸಾಂಜೋ ಸುನಿಲ್ ಅವರು ತಿಂಗಳ ಹಿಂದಷ್ಟೇ ಐರ್ಲೆಂಡ್ ದೇಶಕ್ಕೆ ತೆರಳಿದ್ದು, ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
- Advertisement -


