- Advertisement -
![]()
- Advertisement -
ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪುತ್ತೂರಿನ ಯುವಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಫೈ ಓವರ್ ನಲ್ಲಿ ನಡೆದಿದೆ. ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಮೃತ ಯುವಕ.
ಪಾಣೆಮಂಗಳೂರು ಫೈ ಓವರ್ ಬಳಿ, ಮೂವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಕಾರ್ತಿಕ್ ಗಂಭೀರ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
- Advertisement -


