Sunday, April 28, 2024
Homeತಾಜಾ ಸುದ್ದಿಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರ ನಿರ್ಮಿಸಿದ ಯುವಕ; ಸಾಮಾಜಿಕ ಜಾಲತಾಣದಲ್ಲಿ ಫೋಟೋ...

ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರ ನಿರ್ಮಿಸಿದ ಯುವಕ; ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

spot_img
- Advertisement -
- Advertisement -

ಗದಗ: ಕಿಡಿಗೇಡಿಯೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರ ನಿರ್ಮಿಸಿ ಆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪಜೀತಿಗೆ ಸಿಲುಕಿದ್ದಾನೆ.

ಇಂದು ದೇಶದ ಪ್ರತಿಯೊಬ್ಬ ರಾಮ ಭಕ್ತರು ಕೂಡ ಶ್ರೀ ರಾಮನ ನಾಮ ಜಪ ಮಾಡುತ್ತಿದ್ದಾರೆ. ಉಪವಾಸ, ವ್ರತ, ವಿಶೇಷ ಪೂಜೆ, ದಾನ ಹೀಗೆ ವಿವಿಧ ಕಾರ್ಯಗಳಲ್ಲಿ ತೊಡಗಿದ್ದಾರೆ. ಬೆಳಿಗ್ಗೆಯಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ಕೂಡ ನಡೆದಿವೆ. ಪ್ರಮುಖ ರಸ್ತೆ, ಗಲ್ಲಿ ಗಲ್ಲಿಗಳಲ್ಲೂ ಶ್ರೀರಾಮ ಚಿತ್ರವಿರುವ ಫ್ಲೆಕ್ಸ್‌ಗಳು ಹಾಗೂ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ಹೀಗಿರುವಾಗ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬಾತ ಕಿಡಿ ಹೊತ್ತಿಸುವಂತಹ ಕೆಲಸ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಈತ ಸಾಮಾಜಿಕ ಜಾಲತಾಣದಲ್ಲಿ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಹರಿಬಿಟ್ಟಿದ್ದಾನೆ. ಈ ಘಟನೆಯು ಆಕ್ರೋಶಕ್ಕೆ ಗುರಿಯಾಗಿದೆ. ಇಂದು ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದ್ದು,ಈತನ ಈ ಕಿಡಿಗೇಡಿತನಕ್ಕೆ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದು ತಪ್ಪಿತಸ್ತನನ್ನು ಬಂಧಿಸುವಂತೆ ಹಾಗೂ ಕೂಡಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇನ್ನು ಗಜೇಂದ್ರಗಡ ಪೊಲೀಸರು ತಾಜುದ್ದೀನ್ ದಫೇದಾರ್ ಎಂಬಾತವನ್ನು ಬಂಧಿಸಿದ್ದಾರೆ. ಈ ಘಟನೆ ಬೆನ್ನಲ್ಲೆ ಪಟ್ಟದಲ್ಲಿ ಬಿಗಿವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸ್ ಠಾಣೆಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ತಡರಾತ್ರಿ ತೆರಳಿ ಯುವಕನಿಗೆ ತರಾಟೆ ತೆಗೆದುಕೊಂಡಿದ್ದಾರೆ. ಯುವಕನ ವಿರುದ್ಧ ದೂರು ದಾಖಲಾಗಿದ್ದು ವಿಚಾರಣೆ ಮಾಡಲಾಗುತ್ತಿದ

- Advertisement -
spot_img

Latest News

error: Content is protected !!