Saturday, April 27, 2024
Homeಅಪರಾಧಕಾಫಿನಾಡಲ್ಲಿ ಹಣದ ವಿಚಾರಕ್ಕೆ ಯುವಕನನ್ನ ಮರಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣ; ಪ್ರಕರಣದ ಐವರು ಆರೋಪಿಗಳನ್ನು ಬಂಧಿಸಿದ...

ಕಾಫಿನಾಡಲ್ಲಿ ಹಣದ ವಿಚಾರಕ್ಕೆ ಯುವಕನನ್ನ ಮರಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣ; ಪ್ರಕರಣದ ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಚಿಕ್ಕಮಗಳೂರು: ಹಣದ ವಿಚಾರಕ್ಕೆ ಯುವಕನೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆಯು ಕೊಪ್ಪ ತಾಲೂಕಿನ ಸೋಮ್ಲಾಪುರ ರಸ್ತೆಯ ಪ್ಲಾಂಟೇಶನ್ ನಲ್ಲಿ ನಡೆದಿದ್ದು, ಈ ಘಟನೆಯ ಐದು ಆರೋಪಿಗಳನ್ನು ಕೊಪ್ಪ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಮಹೇಶ್, ವಿಠಲ್, ಸಿರಿಲ್, ಸುನೀಲ್, ಮಂಜು ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಸತೀಶ್ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ವಿವರ: ಕೊಪ್ಪ ಸಮೀಪದ ಕರ್ಕೇಶ್ವರ ಗ್ರಾಮದ ಸತೀಶ್ ಎಂಬವರು ಹೋಟೆಲ್ ಕೆಲಸದ ಸಂಬಳ ಕೇಳಿದ್ದಕ್ಕೆ ಅವರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಲಾಗಿತ್ತು. ಹಗ್ಗದಿಂದ ಕೈ ಕಾಲು ಕಟ್ಟಿ ಯುವಕನಿಗೆ ಚಿತ್ರಹಿಂಸೆ ನೀಡುತ್ತಿರುವ ದೃಶ್ಯವನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದ್ದು, ಈ ವಿಡಿಯೋ ಎಲ್ಲೆಡೆಯೂ ವೈರಲ್ ಆಗಿತ್ತು. ಈ ಕೃತ್ಯದಲ್ಲಿ ತೊಡಗಿಕೊಂಡಿದ್ದ ಯುವಕರ ಗುಂಪು ಮದ್ಯಪಾನ ಮಾಡಿದ್ದರು ಎಂದು ತಿಳಿದು ಬಂದಿದೆ.

ಇನ್ನು ಈ ಹಲ್ಲೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರ ಬಂಧನಕ್ಕೆ ಚಿಕ್ಕಮಗಳೂರು ಎಸ್ಪಿ ತಂಡ ರಚನೆಯನ್ನು ಮಾಡಿದ್ದರು. ಇದೀಗ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಕೊಪ್ಪ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!