Wednesday, October 14, 2026
Homeಕರಾವಳಿಕಾರ್ಕಳ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಕಾರ್ಕಳ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಎಂಬಲ್ಲಿ ನಡೆದಿದೆ.

ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ತೋಟದಲ್ಲಿ ಕೂಲಿ ಕಾರ್ಮಿಕ ನಾಗಿ ಕೆಲಸ ಮಾಡಿಕೊಂಡಿದ್ದ 23 ವರ್ಷದ ಸುಜಿತ್ ಮೃತ ದುರ್ದೈವಿ.

ಸುಜಿತ್ ಡಿ.12ರಂದು ಸಚ್ಚರಿಪೇಟೆ ಪೆಟ್ರೋಲ್ ಪಂಪ್ ಬಳಿ ಇಳಿಜಾರು ರಸ್ತೆಯಲ್ಲಿ ಹೋಗುತ್ತಿರುವಾಗ ಸೈಕಲಿನ ಹತೋಟಿ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸುಜಿತ್ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!