Tuesday, May 7, 2024
Homeಕರಾವಳಿಉಡುಪಿಬ್ರಹ್ಮಾವರ: ಮನೆಯಿಂದ ಹೊರಹೋದ ಯುವಕ ನಾಪತ್ತೆ

ಬ್ರಹ್ಮಾವರ: ಮನೆಯಿಂದ ಹೊರಹೋದ ಯುವಕ ನಾಪತ್ತೆ

spot_img
- Advertisement -
- Advertisement -

ಬ್ರಹ್ಮಾವರ: ಸೆಪ್ಟೆಂಬರ್ 26 ರಂದು ಬೆಳಗ್ಗೆ 11.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದ ಯುವಕ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಕಾರ್ತಿಕ್ ಎನ್ (19) ಎಂಬಾತನೇ ನಾಪತ್ತೆಯಾದ ಯುವಕ.

5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820 2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!