Thursday, June 25, 2026
Homeತಾಜಾ ಸುದ್ದಿಆನ್‌ಲೈನ್ ಗೇಮ್ ಚಟಕ್ಕೆ ಬಲಿಯಾಗಿದ್ದ ಯುವಕ; ಲಕ್ಷಾಂತರ ರೂಪಾಯಿ ಸಾಲ; ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಆನ್‌ಲೈನ್ ಗೇಮ್ ಚಟಕ್ಕೆ ಬಲಿಯಾಗಿದ್ದ ಯುವಕ; ಲಕ್ಷಾಂತರ ರೂಪಾಯಿ ಸಾಲ; ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಬೀದರ್: ಯುವಕನೊಬ್ಬ ಆನ್‌ಲೈನ್ ಗೇಮ್ ಚಟಕ್ಕೆ ಬಲಿಯಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ಪರಿಣಾಮ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್‌ನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕ ವಿಜಯ್‌ಕುಮಾರ್ ಜಗನ್ನಾಥ ಹೊಳ್ಳೆ (25) ಎಂದು ಗುರುತಿಸಲಾಗಿದೆ.

ಆತ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಜ್ಯೋತಿ ತಾಂಡಾದ ಬಳಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ದೇಹದ ಬಹುತೇಕ ಭಾಗ ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.

ಜಗನ್ನಾಥ ಹೊಳ್ಳೆ ಆನ್‌ಲೈನ್ ಗೇಮ್ ಹುಚ್ಚಿಗೆ ಬಿದ್ದು 12 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಬಿ.ಫಾರ್ಮಸಿ ಪದವೀಧರನಾಗಿದ್ದು ಕೆಲ ತಿಂಗಳಿಂದ ಆನ್‌ಲೈನ್ ಗೇಮ್ ಹುಚ್ಚಿಗೆ ಬಿದ್ದಿದ್ದ ಎನ್ನಲಾಗಿದೆ. ಲಕ್ಷಾಂತರ ರೂಪಾಯಿ ಸಾಲ‌ ಮಾಡಿ ಆನ್‌ಲೈನ್‌ನಲ್ಲಿ ಕಳೆದುಕೊಂಡಿದ್ದ ಯುವಕನ ಹಣವನ್ನು ಈಗಾಗಲೇ ಕುಟುಂಬಸ್ಥರು 10 ಲಕ್ಷ ಸಾಲ ತೀರಿಸಿದ್ದರು. ಆದರೆ ಮತ್ತೆ ಎರಡು ಲಕ್ಷ ಸಾಲ ಮಾಡಿಕೊಂಡಿದ್ದ ವಿಜಯಕುಮಾರ್, ಈ ಸಾಲದ ವಿಷಯ ಮನೆಯಲ್ಲಿ ಗೊತ್ತಾದರೆ ತೊಂದರೆ ಆಗುತ್ತದೆ ಎನ್ನೋ ಕಾರಣದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!