Wednesday, June 3, 2026
Homeಕರಾವಳಿಮಂಗಳೂರುಮಂಗಳೂರು; ಲಾರಿ ಹರಿದು ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಸಾವು

ಮಂಗಳೂರು; ಲಾರಿ ಹರಿದು ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಸಾವು

- Advertisement -
- Advertisement -

ಮಂಗಳೂರು; ಲಾರಿ ಹರಿದು ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಉಚ್ಚಿಲ- ಸಂಕೋಳಿಗೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ನಾಟೆಕಲ್ ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಮೃತ ಯುವಕ.

ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅಝರ್, ಮಂಗಳವಾರ ರಾತ್ರಿ ತಲಪಾಡಿಯಿಂದ ಬರುತ್ತಿದ್ದ ವೇಳೆ ಸಂಕೊಳಿಗೆ ಹಾಲ್ ಬಳಿ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಸ್ಕೂಟರ್ ಗೆ ತಾಗಿದೆ ಎನ್ನಲಾಗಿದೆ. ಈ ವೇಳೆ ಸವಾರ ಅಝರ್ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆಗ ಲಾರಿಯ ಹಿಂಬದಿ ಚಕ್ರ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಝರ್ ಅವರ ಮೃತದೇಹವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಕಾರಣವಾದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!