Sunday, June 7, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: 1 ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

ಉಪ್ಪಿನಂಗಡಿ: 1 ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಉಪ್ಪಿನಂಗಡಿ: 1 ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ನೌಷದ್ ಬೊಳ್ಳಾರ್ (34) ಮೃತ ಯುವಕ.

ಕಳೆದ ಜೂ. 7ರಂದು ಬಕ್ರಿದ್ ಹಬ್ಬದ ದಿನ 34ನೇ ನೆಕ್ಕಿಲಾಡಿಯ ಬೊಳ್ಳಾರ್ ಎಂಬಲ್ಲಿ ರಾ. ಹೆ.75ರಲ್ಲಿ ಅಗರಬತ್ತಿ ಖರೀದಿಸಲೆಂದು ಬೈಕ್‌ನಲ್ಲಿ ಅಂಗಡಿಗೆ ಹೋಗಿ ಹಿಂದಿರುಗುವ ಸಂದರ್ಭ ಇನ್ನೊಂದು ಬೈಕ್ ಢಿಕ್ಕಿ ಹೊಡೆದು ನೌಷದ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆದಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರು ಪತ್ನಿ, ನವಜಾತಶಿಶು ಸಹಿತ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

- Advertisement -

Latest News

error: Content is protected !!