- Advertisement -
![]()
- Advertisement -
ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇಂದು ನಡೆದಿದೆ.
ಬ್ರಹ್ಮರಕೂಟ್ಟು ಕಳ್ಳಿಗೆ ನಿವಾಸಿ ಮುಝಮ್ಮಿಲ್ ಮೃತ ಯುವಕ.
ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ನ. 9ರಂದು ರಾತ್ರಿ ವೇಳೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯವಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಮುಝಮ್ಮಿಲ್ ಮೃತಪಟ್ಟಿದ್ದಾನೆ.
- Advertisement -


