Monday, October 26, 2026
Homeಕರಾವಳಿಕೇರಳಕ್ಕೆ ಕೆಲಸಕ್ಕೆ ತೆರಳಿದ ಯುವಕ ನಾಪತ್ತೆ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೇರಳಕ್ಕೆ ಕೆಲಸಕ್ಕೆ ತೆರಳಿದ ಯುವಕ ನಾಪತ್ತೆ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ: ಕೆಲಸದ ನಿಮಿತ್ತ ಕೇರಳಕ್ಕೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವಕನನ್ನು ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಂತೋಷ್ (27) ಎಂದು ಗುರುತಿಸಲಾಗಿದೆ. ಇವರು ಕೆಂಪು ಕಲ್ಲಿನ ಲಾರಿಗಳಲ್ಲಿ ಲೋಡರ್ ಆಗಿ ಕೆಲಸ ಮಾಡುತ್ತಿದ್ದರು.

2026ರ ಮೇ 1ರಂದು ಬೆಳಗ್ಗೆ ಸುಮಾರು 8.30ಕ್ಕೆ ಕೇರಳಕ್ಕೆ ಕೆಲಸಕ್ಕೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಸಂತೋಷ್, ಅಂದಿನಿಂದ ಮನೆಗೆ ಮರಳಿಲ್ಲ. ಅಷ್ಟಮಿಯ ವೇಳೆಗೆ, ಅಂದರೆ ಎರಡು ತಿಂಗಳ ಬಳಿಕ ವಾಪಸ್ ಬರುವುದಾಗಿ ತಿಳಿಸಿ ಹೋಗಿದ್ದ ಅವರು, ಮನೆಯಿಂದ ತೆರಳಿದ ಬಳಿಕ ಕುಟುಂಬದ ಯಾರಿಗೂ ಕರೆ ಮಾಡಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂತೋಷ್ ಸುಮಾರು 6 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಕನ್ನಡ, ತುಳು ಹಾಗೂ ಮಲಯಾಳಂ ಭಾಷೆಗಳನ್ನು ಮಾತನಾಡುತ್ತಾರೆ.

ಸಂತೋಷ್ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಪರ್ಕ ಸಂಖ್ಯೆಗಳು: 08255-232111, 9480805367, 0824-9480805300.

- Advertisement -

Latest News

error: Content is protected !!