Thursday, June 4, 2026
Homeಕರಾವಳಿಉಡುಪಿನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಉಡುಪಿ: ಅಪರಿಚಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಉಡುಪಿಯ ಹಳೆ ಆರ್‌ಟಿಒ ಕಚೇರಿ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ನ.27ರ ಬುಧವಾರದಂದು ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ನಗರ ಪೋಲಿಸ್‌ ಠಾಣೆಯ ಎಎಸ್‌ಐ ಹರೀಶ್‌, ಸಿಬಂದಿ ಜಾಸ್ವ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊಳೆತ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.

ಅನ್ಯ ರಾಜ್ಯದ ವಲಸೆ ಕಾರ್ಮಿಕನ ಮೃತದೇಹ ಇದಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವ್ಯಕ್ತಿ ಮೃತಪಟ್ಟು ಏಳು ದಿನಗಳು ಕಳೆದಿರ ಬಹುದೆಂದು ಕೊಳೆತು ಹೋದ ಶವದಿಂದ ಅಂದಾಜಿಸಲಾಗಿದೆ. ಮೃತನ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

- Advertisement -

Latest News

error: Content is protected !!