- Advertisement -
![]()
- Advertisement -
ಉಡುಪಿ: ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಪಾಗಲ್ ಪ್ರೇಮಿಯಿಂದ ಚಾಕು ಇರಿತಕ್ಕೆ ಒಳಗಾದ ಯುವತಿ ರಕ್ಷಿತಾ ಸಂಜೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಚಾಕು ಇರಿದ ಪರಾರಿಯಾಗಿದ್ದ ಯುವಕ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.
ಆರೋಪಿ ಕಾರ್ತಿಕ್ ಪೂಜಾರಿ ಶವ ಬಾವಿಯಲ್ಲಿ ಪತ್ತೆಯಾಗಿದೆ. ಇಂದು ಬೆಳಗ್ಗೆ ಯುವತಿ ರಕ್ಷಿತಾಳನ್ನು ಚಾಕುವಿನಿಂದ ಇರಿದಿದ್ದ. ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಇದೀಗ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.
- Advertisement -


