Sunday, June 7, 2026
Homeಕರಾವಳಿಬೆಳ್ತಂಗಡಿ:ಯುವತಿ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

ಬೆಳ್ತಂಗಡಿ:ಯುವತಿ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

- Advertisement -
- Advertisement -

ಬೆಳ್ತಂಗಡಿ:ಯುವತಿ ಅಡುಗೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಫಾತಿಮತ್ ರಂಝೀನ್ (19)  ಎಂಬವರು 19.02.2025 ರಂದು ಬೆಳಿಗ್ಗೆ ಸಮಯ ಸುಮಾರು 9.00 ಗಂಟೆಗೆಮನೆಯ ಬಾಗಿಲು ತೆರೆದಿಟ್ಟು  ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ಸುಮಾರು ಬೆಳಿಗ್ಗೆ 9.30 ರ ವೇಳೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಕಾಪಾಟಿನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಅದರಲ್ಲಿ ಇಟ್ಟಿದ್ದ  ಸುಮಾರು 52 ಗ್ರಾಂ  ಚಿನ್ನಾಭರಣಗಳು ಕೂಡಾ ಕಾಣೆಯಾಗಿವೆ. ಈ ಬಗ್ಗೆ ಫಾತಿಮತ್ ರಂಝೀನ್ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾನು ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಸುಮಾರು 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!